ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಿಬ್ಬಂದಿಗಳಿಗೆ ಮೃದುಕೌಶಲ್ಯ ತರಬೇತಿ ಕಾರ್ಯಕ್ರಮ.


ಕುಕ್ಕೆ ಸುಬ್ರಹ್ಮಣ್ಯ; ನ,15,ರಂದು, ಪುತ್ತೂರು ಸಹಾಯಕ ಆಯುಕ್ತರು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ಜುಬಿನ್ ಮಹಾಪಾತ್ರ ಅವರ ಸೂಚನೆಯಂತೆ, ಉಪಸ್ಥಿತಿಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಿಬ್ಬಂದಿಗಳಿಗೆ ಮೃದು ಕೌಶಲ್ಯ ತರಬೇತಿ ಕಾರ್ಯಕ್ರಮ ನವೆಂಬರ್ 15ರಂದು ನಡೆಯಿತು.
ಕುಕ್ಕೆ ಸುಬ್ರಹ್ಮಣ್ಯ ಪ್ರಸಿದ್ಧ ದೇವಾಲಯವಾಗಿದ್ದು ಸುಬ್ರಹ್ಮಣ್ಯಕ್ಕೆ ದೇಶ ವಿದೇಶಗಳಿಂದ, ರಾಜ್ಯ ಸೇರಿದಂತೆ ಹೊರರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಗವದ್ಭಕ್ತರು ಆಗಮಿಸುತ್ತಾರೆ.
ಶ್ರೀ ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಿ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸೇವೆಯನ್ನು ಸಲ್ಲಿಸುತ್ತಾರೆ.
ಈ ಸಂದರ್ಭದಲ್ಲಿ ಭಗವತ್ಭಕ್ತರ ಜೊತೆ,ಒಳ್ಳೆಯ ವರ್ತನೆಯನ್ನು ಹೇಗೆ ನಿರ್ವಹಿಸಬೇಕು, ಒತ್ತಡದ ಸಂದರ್ಭಗಳನ್ನು ಹೇಗೆ ನಿರ್ವಹಿಸಬೇಕು, ಭಗವತ್ಭಕ್ತರ ಜೊತೆ ಯಾವ ರೀತಿ ಮಾತನಾಡಬೇಕು ,ಶಾಂತತೆಯನ್ನು ಕಾಪಾಡಿಕೊಳ್ಳುವುದು ಹೇಗೆ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪೂಜೆ ಸೇವೆಗಳ ಮಾಹಿತಿಗಳನ್ನು ವಿನಯ ಪೂರಕವಾಗಿ ಹೇಗೆ ತಿಳಿಸಬೇಕು ಎಂಬ ವಿಚಾರಗಳ ಬಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಎ.ಇ.ಒ ಹಾಗೂ ದೇವಸ್ಥಾನದ ಎಲ್ಲಾ ಕಾಯಂ ಮತ್ತು ಮೇಲ್ವಿಚಾರಣಾ ಸಿಬ್ಬಂದಿಗಳಿಗೆ ,ಉಪ್ಪಿನಂಗಡಿಯ ಜಿ.ಎಫ್‌.ಜಿ.ಸಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ,ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಮಾಸ್ಟರ್ ಟ್ರೈನರ್ ಆಗಿರುವ ನಂದೀಶ್ ಅವರು  ತರಬೇತಿ ನೀಡಿದರು.
ಇದು ಎರಡನೇ ಹಂತದ ತರಬೇತಿ ಕಾರ್ಯಕ್ರಮ ಆಗಿದ್ದು,
ಮೊದಲನೇ ಹಂತದಲ್ಲಿ ಸುಬ್ರಹ್ಮಣ್ಯ ಪೊಲೀಸ್ ಠಾಣೆ ಹಾಗೂ ದೇವಾಲಯದ ಆಡಳಿತ ಅಧಿಕಾರಿಗಳು ಜಂಟಿಯಾಗಿ ದೇವಾಲಯದ ಭದ್ರತಾ ಸಿಬ್ಬಂದಿಗಳಿಗೆ ವಿಶಿಷ್ಟವಾದ ಶಿಸ್ತು ತರಬೇತಿಯನ್ನು ಏರ್ಪಡಿಸಲಾಗಿತ್ತು. ಮುಂದಿನ ದಿನಗಳಲ್ಲಿ, ಎಲ್ಲಾ ಹೊರಗುತ್ತಿಗೆ ಸಿಬ್ಬಂದಿಗಳಿಗೆ ಮೂರನೇ ಸುತ್ತಿನ ತರಬೇತಿ ಯೋಜಿಸಲಾಗಿದೆ.
ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಅಧಿಕಾರಿಗಳು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

Post a Comment

Previous Post Next Post

Featured Posts

Post ADS 1

Main Slider

Post ADS 2