ಸುಬ್ರಹ್ಮಣ್ಯ ಅ.29: ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಅಗತ್ಯವುಳ್ಳ ಧ್ವನಿವರ್ಧಕ ಪರಿಕರಗಳ ಕೊಡುಗೆಯನ್ನು ಇಂದು ಮಂಗಳವಾರ ಹಸ್ತಾಂತರಿಸಲಾಯಿತು.
ಕೊಡುಗೆಗಳನ್ನು ಹಸ್ತಾಂತರಿಸಿ ಮಾತನಾಡಿದ ಪಂಜದ ಹಿರಿಯ ಸಹಕಾರಿ ಧುರೀಣ ಲಯನ್ಸ್ ಜಿಲ್ಲಾ ರಾಯಭಾರಿ ಜಾಕೆ ಮಾಧವ ಗೌಡ ಮಾತನಾಡಿ ಸಮಾಜ ಸೇವೆಯೇ ರೋಟರಿಯ ಮುಖ್ಯ ಉದ್ದೇಶವಾಗಿಟ್ಟುಕೊಂಡು ಸರಕಾರಿ ಶಾಲೆಗಳ ಮೂಲಭೂತ ಸೌಕರ್ಯಗಳನ್ನು ಮನಗಂಡು ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಅನುಕೂಲವಾಗುವ ಪ್ರತಿಭಾ ಪ್ರದರ್ಶನ ,ಪಾಠೇತರ ಚಟುವಟಿಕೆ, ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಧ್ವನಿವರ್ಧಕಗಳ ಕೊಡುಗೆ ಅಗತ್ಯವಾಗಿದೆ ಎಂದರು.
ಧ್ವನಿವರ್ಧಕ ಕೊಡುಗೆಗಳ ಪ್ರಯೋಜಕರಾದ ಸುಬ್ರಮಣ್ಯ ರೋಟರಿ ಕ್ಲಬ್ಬಿನ ಪೂರ್ವ ಅಧ್ಯಕ್ಷ ವಸಂತಕುಮಾರ ಕೇದಿಲ ಅವರು ತನ್ನೂರಿನ ಸರಕಾರಿ ಶಾಲೆಗೆ ಧ್ವನಿವರ್ಧಕದ ಕೊಡುಗೆ ನೀಡಲು ತುಂಬಾ ಸಂತೋಷ ಪಡುತ್ತಿದ್ದೇನೆ ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನ ಅಧ್ಯಕ್ಷ ಚಂದ್ರಶೇಖರ್ ನಾಯರ್ ವಹಿಸಿದ್ದರು ವೇದಿಕೆಯಲ್ಲಿ ಸುಬ್ರಹ್ಮಣ್ಯ ಇನ್ನರ್ವೇಲ್ ಕ್ಲಬ್ಬಿನ ಅಧ್ಯಕ್ಷ ಶೃತಿ ಮಂಜುನಾಥ್ ಶಾಲಾ ಮೇಲೆ ಸುವಾರಿ ಹಾಗೂ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸೋಮಶೇಖರ ನೇರಳ, ಹಿರಿಯ ರೋಟರಿ ಸದಸ್ಯ ಸುದರ್ಶನ ಶೆಟ್ಟಿ, ರೋಟರಿ ವಲಯ ಜೊನಲ್ ಲೆಫ್ಟಿನೆಂಟ್ ವಿಶ್ವನಾಥ ನಡುತೋಟ ,ಶಾಲಾ ಮುಖ್ಯ ಶಿಕ್ಷಕಿ ಲೀಲಾ ಕುಮಾರಿ ಟಿ ಉಪಸ್ಥಿತರಿದ್ದರು.
ಸಭೆಯಲ್ಲಿ ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಹೆತ್ತವರು, ಪೋಷಕರು ಶಿಕ್ಷಕ ವೃಂದದವರು,ಎಸ್ ಡಿ ಎಂ ಸಿ ಉಪಾಧ್ಯಕ್ಷರು ಹಾಗೂ ಸದಸ್ಯರು, ಊರಿನ ಗಣ್ಯರು ,ಸಂಘ-ಸಂಸ್ಥೆಗಳ ಮುಖ್ಯಸ್ಥರು ಹಾಗೂ ಸದಸ್ಯರುಗಳು ಹಾಜರಿದ್ದರು.
إرسال تعليق