ಕಡಬ: ನ;2,ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕೋಡಿಂಬಾಳ ಗ್ರಾಮದ ಪುಳಿಕುಕ್ಕು ಸಮೀಪ ನಡೆದಿತ್ತು. ಇದೀಗ ಈ ಘಟನೆ ಹೊಸ ತಿರುವು ಪಡೆದುಕೊಂಡಿದ್ದು ಸ್ಥಳದಲ್ಲಿ ಸಾರ್ವಜನಿಕರು ರಸ್ತೆ ತಡೆದು ಪ್ರತಿಭಟನೆಗೆ ಮುಂದಾಗಿದ್ದಾರೆ.
ರಸ್ತೆಗೆ ಬಿದ್ದಿರುವ ಮರಗಳನ್ನು ಅರಣ್ಯಾಧಿಕಾರಿಗಳು ತೆರವುಗೊಳಿಸಲು ಮುಂದಾದ ವೇಳೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಮೃತ ಸವಾರನ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ.
ಅರಣ್ಯ ಇಲಾಖೆಯ ಪ್ರಕಾರ ಕಾಡು ಪ್ರಾಣಿಗಳಿಂದ ಏನಾದರೂ ಅನಾಹುತ ಆದರೆ ಮಾತ್ರ ಪರಿಹಾರವಿದೆ, ಮರ ಬಿದ್ದರೆ ಪರಿಹಾರ ನೀಡುವ ಅವಕಾಶವಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಅರಣ್ಯ ಇಲಾಖೆಯ ನಿರ್ಲಕ್ಷ್ಯ ದಿಂದ ಈ ಘಟನೆ ನಡೆದಿದೆ ಎಂದು ಆರೋಪಿಸಿ ಸಾರ್ವಜನಿಕರು ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವಂತೆ ಪಟ್ಟು ಹಿಡಿದಿದ್ದಾರೆ.
ದಿಡೀರ್ ಪ್ರತಿ ಭಟನೆಯಿಂದ ಪಂಜ- ಕಡಬ ವಾಹನ ಸಂಚಾರ ಸ್ಥಗಿತವಾಗಿದ್ದು ವಾಹನಗಳು ಸಾಲುಗಟ್ಟಿ ನಿಂತಿವೆ. ಸ್ಥಳದಲ್ಲಿ ಕಡಬ ಪೊಲೀಸರು ಪಹರೆ ಕಾಯುತ್ತಿದ್ದಾರೆ.
Post a Comment